ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚಿನಾವಣೆ: ನಾಳೆ ಕೋರ್ ಕಮಿಟಿ ಸಭೆ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ನೆನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ ಕಟೀಲ ಅವರವಜತೆ ಬೇರೆ ವಿಚಾರ ಚರ್ಚೆ ಆಗಿದೆ. ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top