ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ

ಬೆಂಗಳೂರು: ನಟ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ೧ ಎನಿಸಿಕೊಂಡರೆ,  ದರ್ಶನ್ ಎ೨ ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಈ ಪ್ರಕರಣದಿಂದ ವಿಜಯಲಕ್ಷ್ಮಿ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಇನ್ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಕರ‍್ತಿ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಆ್ಯಕ್ಟೀವೇಟ್ ಮಾಡಿದ್ದಾರೆ.

ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್ ಮಾಡುತ್ತಾರೆ. ಸಾಕಷ್ಟು ವದಂತಿಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಇದೆಲ್ಲವೂ ಮತ್ತಷ್ಟು ಚುಚ್ಚುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಈ ರೀತಿಯ ನರ‍್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

 

ದರ್ಶನ್ ಅರೆಸ್ಟ್ ಆದ ಬಳಿಕ ಮೊದಲು ಪ್ರಾಫೈಲ್ ಪಿಕ್ಚರ್ನ ವಿಜಯಲಕ್ಷ್ಮಿ ಅವರು ತೆಗೆದಿದ್ದರು. ಆ ಬಳಿಕ ದುಬೈ ಟ್ರಿಪ್ ತೆರಳಿದ ಫೋಟೋಗಳನ್ನು ಅವರು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ದುಬೈಗೆ ತೆರಳಿದ್ದ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವರ‍್ಷಿಕೋತ್ಸವ ಆಚರಿಸಿಕೊಂಡಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top