ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಈ ನಿರ್ಧಾರವನ್ನು ಇವರು ತೆಗೆದುಕೊಂಡಿದ್ದು ನಿಜಕ್ಕೂ ಟೀಮ್ ಇಂಡಿಯಾಕ್ಕೆ ದೊಡ್ಡ ಪೆಟ್ಟು ಬಿದ್ದಂತೆ ಆಗಿದೆ. ಇವರು ಈಗಾಗಲೇ ಟಿ20 ಕ್ರಿಕೆಟ್ ವಿದಾಯ ಹೇಳಿದ್ರು. ಇನ್ನು ಟೆಸ್ಟ್ ಕ್ರಿಕೆಟ್‌ಗೂ ವಿದಾಯ ಹೇಳಿದ್ದಾರೆ. ಇವರ ಈ ನಿರ್ಧಾರ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ.
ಐಪಿಎಲ್ ಮಧ್ಯದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಸಹ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇವರ ಬೆನ್ನಲ್ಲೆ ವಿರಾಟ್ ಕೊಹ್ಲಿ ಸಹ ತಂಡದಿಂದ ಹಿಂದೆ ಸರಿದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಬಾರ್ಡರ್ ಗವಾಸ್ಕರ್ ಸರಣಿ ಹಾಗೂ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ನೀರಸ ಪ್ರದರ್ಶನ ನೀಡಿದ್ದ ವಿರಾಟ್ ಟೀಕೆಗೆ ಗುರಿಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಅವರು ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿತ್ತು.