ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆ

ಬೆಂಗಳೂರು: ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ‘ಪಿಎಂ-ಕಿಸಾನ್’ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಲಿದ್ದಾರೆ.

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದು; ಆ ನಂತರ ಅವರು ಮಧ್ಯಾಹ್ನ 1.30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 2.30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು.

ಸಂಜೆ 4 ಗಂಟೆಗೆ ಕೃಷಿ ವಿಶ್ವವಿದ್ಯಾಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಾಕಿದ್ದಾರೆ.

 

ಸಂಜೆ 7 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top