ಬೆಂಗಳೂರು : ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ಹೈಕಮಾAಡ್ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ ಮಂತ್ರಿಗಿರಿ ಪಡೆಯಲು ಲಾಬಿ ಜೋರಾಗಿದೆ. ಹೈಕಮಾಂಡ್ ಮೇಲೆ ಪ್ರಭಾವ ಬೀರಲು ಪೈಪೋಟಿಗಿಳಿದಿದ್ದು. ಅವಕಾಶಕ್ಕಾಗಿ ಶಾಸಕರು ದೆಹಲಿಯಾತ್ರೆ ಆರಂಭಿಸಿದ್ದಾರೆ. ಹಾಲಿ ಸಚಿವರಿಗೆ ಹುದ್ದೆ ಕಳೆದುಕೊಳ್ಳುವ ಆತಂಕ ಹೆಚ್ಚಾಗಿದ್ದರೆ, ಉಳಿದವರಿಗೆ ಸಚಿವರಾಗುವ ಕಾತರ ಕಂಡು ಬಂದಿದೆ.
ಬಿಹಾರ ವಿಧಾನಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ವೇಳೆ ಹೆಚ್ಚಿನ ಚರ್ಚೆಯಾಗಿಲ್ಲ. ಆದರೆ, ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿದ ವೇಳೆ ಸಂಪುಟ ಪುನರ್‌ರಚನೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎನ್ನಲಾಗಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂಪುಟ ಪುನರ್‌ರಚನೆ ಕೈಗೊಳ್ಳಬಹುದು ಎಂದು ರಾಹುಲ್‌ಗಾಂಧಿ ಹೇಳಿದ್ದು, ಯಾರನ್ನು ಕೈಬಿಡಬೇಕು
ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಚರ್ಚೆ ಬಿರುಸುಗೊಂಡಿದೆ.
ನಿನ್ನೆ ರಾತ್ರಿಯೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿದ ವೇಳೆ ಸಲ್ಲಿಸಬೇಕಾದ ಮನವಿ ಪತ್ರ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೆ ಬೀಡು ಬಿಟ್ಟಿದ್ದು, ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‌ಸಿಂಗ್ ಸುರ್ಜೇವಾಲ ಅವರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾಸಕರಾದ ಪಿ.ಎಂ ಅಶೋಕ್. ಎ.ಎಸ್.ಪೊನ್ನಣ್ಣ, ಬಸವರಾಜ ರಾಯರೆಡ್ಡಿ, ಅಪ್ಪಾಜಿನಾಡಗೌಡ ಮತ್ತಿತರರು ಮುಖ್ಯಮಂತ್ರಿ ಅವರ ಜೊತೆ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಚಿವ ಸ್ಥಾನ ಗಿಟ್ಟಿಸಲು ಲಾಬಿ ನಡೆಸುತ್ತಿದ್ದಾರೆ. ಜೇವರ್ಗಿ ಶಾಸಕ ಅಜಯ್‌ಸಿಂಗ್, ದಿಢೀರ್ ದೆಹಲಿಗೆ ತೆರಳಿದ್ದು ವರಿಷ್ಠರನ್ನು ಮನವೊಲಿಸಿ ಅವಕಾಶ ಪಡೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.
ಸಚಿವ ಸಂಪುಟ ಪುನರ್‌ರಚನೆಯಲ್ಲಿ ಬಹಳಷ್ಟು ಮಂದಿ ಸಚಿವರನ್ನು ಕೈ ಬಿಡುವ ಸಾಧ್ಯತೆಯೂ ಇದೆ. ಮೂಲಗಳ ಪ್ರಕಾರ ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶರಣಬಸಪ್ಪ ದರ್ಶನಪುರ್, ಶಿವಾನಂದ ಪಾಟೀಲ್, ಆರ್.ಬಿ. ತಿಮಾಪುರ್, ಡಾ. ಶರಣಪ್ರಕಾಶ್ ಪಾಟೀಲ್, ಲಕ್ಷಿö್ಮÃ ಹೆಬ್ಬಾಳ್ಕರ್, ರಹೀಂಖಾನ್, ಡಿ. ಸುಧಾಕರ್ ಅವರು ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಕೆಲವು ಸಚಿವರು ದೆಹಲಿಗೆ ಭೇಟಿ ನೀಡುತ್ತಿದ್ದು ಕುರ್ಚಿ ಭದ್ರಪಡಿಸಿಕೊಳ್ಳಲು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಚಿವ ಸಂಪುಟ ಪುನರ್ ರಚನೆ ಹಸಿರು ನಿಶಾನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೈಕಮಾಂಡ್ ಹಂತದಲ್ಲಿ ಮತ್ತಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಿದ್ದಾರೆ.
ಮೂಲಗಳ ಪ್ರಕಾರ ಹೈಕಮಾಂಡ್ ಒಪ್ಪಿದರೂ ಸ್ಥಳೀಯ ಪರಿಸ್ಥಿತಿಯಲ್ಲಿ ಸಂಪುಟ ಪುನರ್‌ರಚನೆ ಕಷ್ಟಸಾಧ್ಯ ಎನ್ನಲಾಗುತ್ತಿದೆ. ರಾಜ್ಯ ರಾಜಕಾರಣದಲ್ಲಿ ಮೂರ್ನಾಲ್ಕು ಶಕ್ತಿ ಕೇಂದ್ರಗಳು ಸೃಷ್ಟಿಯಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ಪುನರ್‌ರಚನೆಯ ಪರಮಾಧಿಕಾರ ಇದ್ದರೂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಟ್ಟಿಯನ್ನು ಸಮದೂಗಿಸಬೇಕಿದೆ.
ಕಳೆದ ಎರಡೂವರೆ ವರ್ಷಗಳಿಂದ ನಿಗಮ ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರನ್ನು ನೇಮಿಸಲು ಸಾಧ್ಯವಾಗಿಲ್ಲ. ಮಲ್ಲಿಕಾರ್ಜು ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಪ್ರತ್ಯೆಕ ಪಟ್ಟಿಗಳು ಗೊಂದಲಕಾರಿಯಾಗಿದ್ದು, ಅದನನ್ನು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ಸಿಂಗ್ ಸುರ್ಜೇವಾಲ, ಕೆ.ಸಿ ವೇಣುಗೋಪಾಲ ಅವರು ಒಂದಷ್ಟು ದಿನ ತಮ ಕಚೇರಿಯಲ್ಲಿ ಕೊಳೆ ಹಾಕುವುದರಿಂದಾಗಿ ಯಾವುದು ಇತ್ಯರ್ಥವಾಗಿಲ್ಲ, ನೇಮಕಾತಿಯೂ ಪೂರ್ಣಗೊಂಡಿಲ್ಲ. ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಆರಂಭವಾದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಲಾಗುತ್ತಿದೆ.
ಸಂಪುಟ ಪುನರ್ ರಚನೆ : ತೀವ್ರಗೊಂಡ ಲಾಬಿ



