ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್ಗಳು ವಿಶಿಷ್ಟ ಜಾಗೃತಿ ಕರ್ಯಕ್ರಮ ಆಯೋಜಿಸುತ್ತಿವೆ. ಕಳೆದ ರ್ಷ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ್ದಂತೆಯೇ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.
‘ವೋಟ್ ಮಾಡಿ, ಊಟ ಮಾಡಿ’
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿರ್ಗ ಗ್ರ್ಯಾಂಡ್ ಹೋಟೆಲ್ ‘ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. ೨೦೧೮ ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕೇವಲ ಶೇ ೫೪ ರಷ್ಟು ಮತದಾನವಾಗಿತ್ತು ಎಂಬುದು ಬೇಸರದ ಸಂಗತಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್ಗಳಂತಹ ಕೆಲವು ಆಹಾರ ಪದರ್ಥಗಳನ್ನು ಉಚಿತವಾಗಿ ನೀಡುತ್ತಿವೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.
ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡುವ ಹೋಟೆಲ್ಗಳ ಅಭಿಯಾನಕ್ಕೆ ರ್ನಾಟಕ ಹೈಕರ್ಟ್ ಮಧ್ಯಂತರ ಆದೇಶದ ಮೂಲಕ ಮಂಗಳವಾರ ಅನುಮತಿ ನೀಡಿತ್ತು.
ಹಿರಿಯ ನಾಗರಿಕರು, ಅಂಗವಿಕಲರಿಗೆ ಉಚಿತ ಪ್ರಯಾಣ:
ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗೆ ಮತಗಟ್ಟೆಗೆ ಹೋಗಿ ಬರಲು Rapido ಉಚಿತ ಸೇವೆ ಘೋಷಣೆ ಮಾಡಿದೆ. ಭಾರತೀಯ ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೇರಿಕೊಂಡು ಖಚಿಠಿiಜo ಈ ಕ್ರಮಕ್ಕೆ ಮುಂದಾಗಿದೆ. SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು ಖಚಿಠಿiಜo ತಿಳಿಸಿದೆ. ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್ಮೆಂಟ್ ಪರ್ಕ್ ವಂರ್ಲಾ, ಮತದಾನದ ಗುರುತು ಪ್ರರ್ಶಿಸುವವರಿಗೆ ಏಪ್ರಿಲ್ ೨೬, ೨೭ ಮತ್ತು ೨೮ ರಂದು ಟಿಕೆಟ್ ಮೇಲೆ ಶೇಕಡಾ ೧೫ ರಷ್ಟು ರಿಯಾಯಿತಿಯನ್ನು ಘೋಷಿಸಿದೆ.