ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಬದ್ಧರಾಗಿದ್ದೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತಾವು ಬದ್ಧರಾಗಿದ್ದುಹೈಕಮಾಂಡ್‌ ಜೊತೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತಮ್ಮ ನಿವಾಸ ಕಾವೇರಿಯಲ್ಲಿ ಮಾದಿಗ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅವರುಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಅನುಸಾರ ನಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ಹಲವು ದಿನಗಳಿಂದಲೂ ವಾದ-ವಿವಾದಗಳು ತೀವ್ರಗೊಂಡಿವೆ. ಈ ಹಿಂದೆ ಎಸ್‌‍.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿ ಚರ್ಚೆ ನಡೆಸಿ ವರದಿ ನೀಡಿತ್ತು. ಆದರೆ ಅದು ಅವೈಜ್ಞಾನಿಕ ಎಂಬ ಕಾರಣಕ್ಕೆ ಪ.ಜಾತಿಯಲ್ಲಿರುವ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು.

ಸದಾಶಿವ ಆಯೋಗದ ವರದಿ ಯನ್ನು ಜಾರಿಗೊಳಿಸಬೇಕೆಂದು ಮಾದಿಗ ಸಮುದಾಯ ಮೊದಲಿನಿಂದಲೂ ಪಟ್ಟು ಹಿಡಿದಿದೆ. ಕೆಲವು ಸಮುದಾಯಗಳು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದಾಗಿ ಎರಡು ದಶಕದಿಂದಲೂ ವಿವಾದ ನೆನೆಗುದಿಗೆ ಬಿದ್ದಿದೆ.

ಈ ಹಿಂದೆ ಬಿಜೆಪಿಯ ಬಸವರಾಜ ಬೊಮಾಯಿ ನೇತೃತ್ವದ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು.
ಆದರೆ ಅದರಲ್ಲಿನ ಶಿಫಾರಸ್ಸುಗಳನ್ನು ಪರಿಗಣಿಸಿ ಪರಿಶಿಷ್ಟ ಜಾತಿಯಲ್ಲಿರುವ ಎಡಗೈ ಸಮುದಾಯಬಲಗೈ ಸಮುದಾಯಬೋವಿಲಂಬಾಣಿ ಹಾಗೂ ಇತರ ಜಾತಿಗಳಿಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಸಂವಿಧಾನ ತಿದ್ದುಪಡಿ ಮಾಡುವಂತೆಯೂ ಮನವಿ ಮಾಡಲಾಗಿತ್ತು.

ಈ ನಡುವೆ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಒಳಮೀಸಲಾತಿ ಬೇಡಿಕೆಗಳು ಕೇಳಿಬಂದಿದ್ದರಿಂದಾಗಿ ಪ್ರಕರಣ ಸುಪ್ರೀಂಕೋರ್ಟ್‌ನ ಅಂಗಳದಲ್ಲಿ ಇದೇ ತಿಂಗಳ ಆರಂಭದಲ್ಲಿ ತೀರ್ಪು ನೀಡಿರುವ ನ್ಯಾಯಾಲಯ ಒಳಮೀಸಲಾತಿ ನೀಡುವುದು ರಾಜ್ಯಸರ್ಕಾರದ ಬಾಧ್ಯತೆ ಎಂದು ಸ್ಪಷ್ಟಪಡಿಸಿದೆ.

 

ಈ ಹಿನ್ನೆಲೆಯಲ್ಲಿ ಮತ್ತೊಮೆ ವಿವಾದ ಮುನ್ನೆಲೆಗೆ ಬಂದಿದೆ. ಎಡಗೈ ಸಮುದಾಯದ ಮುಖಂಡರೂ ಆಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪಅಬಕಾರಿ ಸಚಿವ ಆರ್‌.ಬಿ.ತಿಮಾಪುರ್‌ಮಾಜಿ ಸಚಿವ ಎಚ್.ಆಂಜನೇಯರಾಜ್ಯಸಭೆಯ ಮಾಜಿ ಸದಸ್ಯ ಎಲ್‌.ಹನುಮಂತಯ್ಯಶಾಸಕರಾದ ಶ್ರೀನಿವಾಸ್‌‍ಬಸವಂತಪ್ಪಡಾ.ತಿಮಯ್ಯಮಾಜಿ ಸಂಸದ ಶಿವಣ್ಣ ಸೇರಿದಂತೆ ಹಲವು ಪ್ರಮುಖ ಮುಖಂಡರ ಜೊತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು. ಸಂಪುಟದಲ್ಲಿ ಚರ್ಚೆ ಮಾಡಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top