ಚಿತ್ರದುರ್ಗ : ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶಕ್ಕೆ ಭಾಗವಹಿಸಲು ಆಗಮಿಸಿದ ಸಿದ್ದರಾಮಯ್ಯನವರನ್ನು ಹೆಲಿಪ್ಯಾಡ್ ನಲ್ಲಿ ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿ, ಇಲ್ಲಿಯವರೆಗೆ ಕಾಂತರಾಜು ವರದಿ ಸಲ್ಲಿಕೆಯಾಗಿಲ್ಲ. ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ವರದಿಯನ್ನು ಸ್ವೀಕಾರ ಮಾಡಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು. ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ತಿಳಿಯಲಿದೆ ಎಂದರು.
ಇಂಡಿಯಾ ಒಕ್ಕೂಟದಿಂದ ಹಲವು ಪಕ್ಷಗಳು ಬಿಟ್ಟು ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ಈ ಕುರಿತಂತೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಯವರು ಮಾಡುತ್ತಾರೆ ಎಂದರು. ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.
ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಜಾರಿ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳಿದರು.
ಹಿಂದೂ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರ ಶಿವಮೊಗ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿಕೆ ನೀಡಿದ್ದರ ಬಗ್ಗೆ ಮಾತನಾಡಿ, ಈ
ಕುರಿತಂತೆ ಯಾವುದೇ ಮಾಹಿತಿ ಇಲ್ಲ, ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಹನುಮಂತನ ಧ್ವಜಾರೋಹಣ ಅರ್ದಕ್ಕೆ ಇಳಿಸಿದ್ದರ ಬಗ್ಗೆ ಮಾತನಾಡಿ, ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಎಂದರು.