ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24×7 ಸಹಾಯವಾಣಿ ಲೋಕಾರ್ಪಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24×7 ಸಹಾಯವಾಣಿ (9482300400) ಯನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್ ರವಿಕುಮಾರ್, ಎ.ನಾರಾಯಣಸ್ವಾಮಿ, ಅ.ದೇವೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್ ನಾಗೇಶ, ರಾಮಣ್ಣ ಲಮಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಇಂಧನ‌ ಇಲಾಖೆ ಎಸಿಎಸ್ ಜಿ. ಕುಮಾರ ನಾಯಕ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ. ರಾಕೇಶಕುಮಾರ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ ಮತ್ತು ಇತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top