ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಆದಲ್ಲಿ ಸಮಸ್ಯೆ ತಪ್ಪಿಸಬಹುದಿತ್ತು : ವೈ.ಎಂ. ಸತೀಶ್

Kannada Nadu
ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಆದಲ್ಲಿ ಸಮಸ್ಯೆ ತಪ್ಪಿಸಬಹುದಿತ್ತು : ವೈ.ಎಂ. ಸತೀಶ್

ಬೆಳಗಾವಿ/ಬಳ್ಳಾರಿ, : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ತುಂಗಭದ್ರ ಜಲಾಶಯಕ್ಕೆ ಸಮಾ ನಾಂತರವಾಗಿ ನವಲಿ ಜಲಾಶಯ ನಿರ್ಮಾಣಕ್ಕಾಗಿ 1000 ಕೋಟಿ ರೂಪಾಯಿ ಅನುದಾನವನ್ನು ಮೀಸಲು ಮಾಡಿದ್ದರು, ಕಾರಣ ನವಲಿ ಸಮಾನಾಂತರ ಜಲಾಶಯದ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಬಳ್ಳಾರಿ – ವಿಜಯನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ಶಾಸಕ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ. ಬೆಳಗಾವಿಯ `ಸುವರ್ಣ ಸೌಧ’ದಲ್ಲಿ ಶುಕ್ರವಾರ ಈ ವಿಷಯವನ್ನು ಪ್ರಸ್ತಾಪಿಸಿದ ವೈ.ಎಂ. ಸತೀಶ್ ಅವರು, ತುಂಗಭದ್ರ ಜಲಾಶಯಕ್ಕೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡಿ, ಭವಿಷ್ಯದಲ್ಲಿ ಅಕಾಲಿಕ ಮಳೆ ಮತ್ತು ನೀರಾವರಿಗೆ ನೀರಿನ ಕೊರತೆ ಆಗುವ ಸಮಸ್ಯೆಯನ್ನು ತಪ್ಪಿಸಲು ಪ್ರಯತ್ನಿಸಬೇಕು. ಆದರೆ, ಬಳ್ಳಾರಿ, ಬಳ್ಳಾರಿ ಗ್ರಾಮಾಂತರ – ಸಿರುಗುಪ್ಪ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಎರಡನೇ ಬೆಳೆಗೆ 6 ರಿಂದ 7 ಟಿಎಂಸಿ (6.80 ಟಿಎಂಸಿ) ಪ್ರಮಾಣದ ನೀರನ್ನು ಹರಿಸಲು ಸಾಧ್ಯವಿತ್ತು. ಆದರೆ, ಸಾಧ್ಯವಾಗಿಲ್ಲ.
ಹಗರಿಬೊಮ್ಮನಹಳ್ಳಿ – ಕೊಟ್ಟೂರು; ಸಂಡೂರು ತಾಲೂಕಿನಲ್ಲಿ ಕೆರೆ ತುಂಬಿಸುವ ಕೆಲಸವನ್ನು ಮಾಡಬೇಕಿದೆ. ಪಾವಗಡಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಮಾರ್ಗಮಧ್ಯದಲ್ಲಿ ಬರುವ ಕೊಟ್ಟೂರಿಗೆ ನೀರು ಪೂರೈಸಲು ಸಾಧ್ಯವಾಗಿಲ್ಲ. ಕಂಪ್ಲಿಯಲ್ಲಿ ಭಾಗಶಃ ಕೆರೆ ತುಂಬಿಸುವ ಕೆಲಸ ಮಾಡಬೇಕು. ನೀರು ನಿರ್ವಹಣೆ ಮತ್ತು ಸಂರಕ್ಷಣೆ ಕುರಿತು ಜನಸಾಮಾನ್ಯರಿಗೆ – ರೈತರಿಗೆ ಜಾಗೃತಿ ಮೂಡಿಸಬೇಕಿದೆ. ಇಲ್ಲವಾದಲ್ಲಿ ಕೃಷಿ ಸಂಕಷ್ಟಕ್ಕೆ ಗುರಿಯಾಗಿ, ರೈತರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕಾರಣ, ತುಂಗಭದ್ರ ಜಲಾಶಯಕ್ಕೆ ಸಮಾನಾಂತರವಾಗಿ ನವಿಲೆ ಸಮಾನಾಂತರ ಜಲಾಶಯವನ್ನು ತ್ವರಿತವಾಗಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";