ಗಂಡಸ್ತನದಿಂದ  ರಾಜಕೀಯ ಮಾಡಬೇಕು -ಡಿಕೆಶಿಗೆ ಸವಾಲು ಹಾಕಿದ ಹೆಚ್ಡಿಕೆ

ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.  

ಸುದ್ದಿಗಾರರ ಜೊತೆ ಮಾತನಾಡಿದ ಅವರುಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾಎಂದು ಆಕ್ರೋಶ ವ್ಯಕ್ತಪಡಿಸಿದರು.

ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ  ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದುಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ನಿನ್ನ ಯೋಗ್ಯತೆಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ. ಕೆಂಪಣ್ಣ ವರದಿ ಏನಾಯಿತುಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿಕೆಟ್ಟ ಪದ ಬಳಸ ಬಾರದು. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ.ಕೆ.ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿವೇಶನ ಕೊಡಿ ಎಂದು 37,000 ರೂಪಾಯಿ ದುಡ್ಡು ಕಟ್ಟಿದ್ದೇನೆ. ನನಗೆ ಈವರೆಗೆ ನಿವೇಶನ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ಸಿನಿಮಾಹಂಚಿಕೆ ನಿರ್ಮಾಣ ಮಾಡುತ್ತಿದ್ದಾಗ ಹಣ ಕಟ್ಟಿದ್ದೆ. ಸತ್ಯ ಸಂಗತಿ ಮುಚ್ಚಿಟ್ಟು ಮೈಸೂರುನಲ್ಲಿ ಬೋರ್ಡ್ಫ್ಲೆಕ್ಸ್ ಹಾಕಿಕೊಂಡಿದ್ದಾರೆ. ಅದನ್ನು ನಿಮ್ಮ ಶಾಸಕರು ಕೊರಳಿಗೆ ಹಾಕಿಕೊಳ್ಳಲಿ. ಆ ಪ್ರಕರಣಲ್ಲಿ ಏನು ಇಲ್ಲ ಎಂದು ಲೋಕಾಯುಕ್ತಸಿಐಡಿ ಯವರು ಹೇಳಿದ್ದಾರೆ. ಈ ಬೋರ್ಡ್ ಕಾಂಗ್ರೆಸ್ ಸ್ವಂತದ್ದ.. ಬಿಜೆಪಿಯಿಂದ ಎರವಲು ತೆಗೆದುಕೊಂಡಿದ್ದಾರೆ ಕಾಂಗ್ರೆಸ್ ಪಕ್ಷದ್ದು ಏನೂ ಇಲ್ಲ ಎಂದು ಸಚಿವರು ಟೀಕಾ ಪ್ರಹಾರ ನಡೆಸಿದರು.

ಇವತ್ತಿನ ಕಾಂಗ್ರೆಸ್ ನಾಯಕರ ಜನಾಂದೋಲನ ನಡೆಯಿತು. ಇವರಿಗೆ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನದ ಘನತೆ ಮರೆತು ಅತ್ಯಂತ ನಿಷ್ಕೃತವಾಗಿ ವರ್ತಿಸಿದ್ದಾರೆ. ವಿಧಾನಸಭೆಯಲ್ಲಿ ನಮ್ಮ ಶಾಸಕರು ಕಡಿಮೆ ಇದ್ದರೂ ದಾಖಲೆ ಸಮೇತ ಹೋರಾಟ ಮಾಡಿದ್ದೇವು. ದಾಖಲೆ ಸಮೇತ ಮಾತನಾಡಿದೆವುಅದರಲ್ಲೇನು ನಾಚಿಕೆ ಇಲ್ಲ ಎಂದು ಅವರು ಹೇಳಿದರು.

ನಾನು ಸಿಎಂ ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ಇದರಲ್ಲಿ ನನ್ನ ಮೇಲೆ ಏನು ಅಪಾದನೆ ಏನೂ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮೋದಿ ಅವರನ್ನು ಭೇಟಿಯಾಗಿದ್ದು ರಕ್ಷಣೆ ಪಡೆಯಲು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಾವು ಯಾವತ್ತು ಕಾಪಾಡಿ ಎಂದು  ಯಾರ ಮನೆ ಬಾಗಿಲಿಗೂ ಹೋಗಿಲ್ಲ. ನೀವು ಲೋಕಾಯಕ್ತ ಮುಚ್ಚಿ ಎಸಿಬಿ ಮಾಡಿದಿರಿ. ಹ್ಯೂಬ್ಲೊಟೊ ವಾಚ್ ಏನಾಯಿತುರೀಡು ಹಗರಣಕೆಂಪಯ್ಯ ವರದಿ ಏನಾಯಿತುಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಸರಕಾರ ಕೆಡವಲು ಪ್ರಯತ್ನ ನಡೆಯುತ್ತದೆಯಂತೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಅವರುಸಂಚು ನಡೆಯುತ್ತಿದೆ ಎಂದು ಯಾರು ಹೇಳಿದರುಅವರಿಗೇನು ಕನಸು ಬಿದ್ದಿತ್ತಾಅಥವಾ ಅಜ್ಜಯ್ಯ ಹೇಳಿದರಾಯಾರು ಹೇಳಿದ್ರಂತೆ ಅವರಿಗೆಎಂದು ಸಚಿವರು ಕೇಳಿದರು.

ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Leave a Comment

Your email address will not be published. Required fields are marked *

Translate »
Scroll to Top