ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ

ಬೆಂಗಳೂರು : ಕರ್ನಾಟಕದಲ್ಲಿ 2000 ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ ನೀಡಿದರು.

ಎಐಸಿಸಿ ಮಾಹಿತಿ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಶಾಸಕ ವಿ. ಮುನಿಯಪ್ಪ, ಕೆಪಿಸಿಸಿ ಸದಸ್ಯತ್ವ ನೋಂದಣಿ ಅಭಿಯಾನ ಸಮಿತಿ ಸಂಚಾಲಕ ಆರ್.ವಿ. ವೆಂಕಟೇಶ್, ಡಿಜಿಟಲ್ ಸದಸ್ಯತ್ವ ನೋಂದಣಿ ವಿಭಾಗದ ಸಂಚಾಲಕ ರಘುನಂದನ್ ರಾಮಣ್ಣ, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಮತ್ತಿತರರು ಜೂಮ್ ಸಂವಾದದಲ್ಲಿ ಪಾಲ್ಗೊಂಡು ಸದಸ್ಯತ್ವ ಅಭಿಯಾನ ಕುರಿತು ಸಂದೇಶ ನೀಡಿದರು.

Leave a Comment

Your email address will not be published. Required fields are marked *

Translate »
Scroll to Top